ಯೆರೆಮೀಯ 27:5 - ಕನ್ನಡ ಸತ್ಯವೇದವು C.L. Bible (BSI)5 ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |