Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:9 - ಕನ್ನಡ ಸತ್ಯವೇದವು C.L. Bible (BSI)

9 “ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:9
26 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ.


ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು.


ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಇಸ್ರಯೇಲರು ಕತ್ತಿಗೆ ತುತ್ತಾಗಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನೂ ಆಗಿದ್ದ ಬಿಳಾಮನೂ ಸೇರಿದ್ದನು.


ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ.


ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.


ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು