Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:1 - ಕನ್ನಡ ಸತ್ಯವೇದವು C.L. Bible (BSI)

1 ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದೇ ವರುಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರುಷದ ಐದನೆಯ ತಿಂಗಳಲ್ಲಿ ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:1
22 ತಿಳಿವುಗಳ ಹೋಲಿಕೆ  

ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಸರ್ವೇಶ್ವರನಿಂದ ಯೆರೆಮೀಯನಿಗೆ ಈ ವಾಣಿಯಾಯಿತು:


ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ಬೆನ್ಯಾಮೀನನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆ ಕುಳಿತಿದ್ದನು. ಅವನು ಪ್ರವಾದಿ ಯೆರೆಮೀಯನನ್ನು, “ನೀನು ಬಾಬಿಲೋನಿಯರನ್ನು ಮರೆಹೋಗಲು ಹೋಗುತ್ತಿರುವೆ,” ಎಂದು ಹೇಳಿ ಅವನನ್ನು ಬಂಧಿಸಿದನು.


ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶೆಫಾನನ ಮಗ ಗೆಮರ್ಯನು, ಹನನೀಯನ ಮಗ ಚಿದ್ಕೀಯನು, ಹೀಗೆ ರಾಜ್ಯಾಧಿಕಾರಿಗಳೆಲ್ಲರು ಕುಳಿತುಕೊಂಡಿದ್ದರು.


ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.


ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.


ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ಚಿದ್ಕೀಯನು ಇಪ್ಪತ್ತೊಂದು ವರ್ಷ ತುಂಬಿದ ಮೇಲೆ ಅರಸನಾಗಿ ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲ ಜನರ ಎದುರಿನಲ್ಲೆ ಪ್ರವಾದಿ ಹನನ್ಯನಿಗೆ:


ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು.


‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿ ಯೆರೆಮೀಯನಿಗೆ ನೀಡಲಾಯಿತು:


ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


“ನೀವೋ, ‘ಸರ್ವೇಶ್ವರ ನಮಗಾಗಿ ಬಾಬಿಲೋನಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾರೆ’ ಎಂದುಕೊಂಡಿದ್ದೀರಿ.


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು