Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:13 - ಕನ್ನಡ ಸತ್ಯವೇದವು C.L. Bible (BSI)

13 “ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಹೋಗಿ ಹನನ್ಯನಿಗೆ - ಯೆಹೋವನು ಇಂತೆನ್ನುತ್ತಾನೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿ, ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಯೆರೆಮೀಯನಿಗೆ ಹೀಗೆಂದನು: “ಹೋಗಿ ಹನನ್ಯನಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ. ನೀನು ಮರದ ನೊಗವನ್ನು ಮುರಿದೆ, ಆದರೆ ನಾನು ಮರದ ನೊಗಕ್ಕೆ ಬದಲಾಗಿ ಕಬ್ಬಿಣದ ನೊಗವನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:13
10 ತಿಳಿವುಗಳ ಹೋಲಿಕೆ  

ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”


ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಚೂರುಚೂರುಗೈದನು ಕಂಚಿನ ಕದಗಳನು I ಮುರಿದುಹಾಕಿದನು ಕಬ್ಬಿಣದ ಅಗುಳಿಗಳನು II


ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.


“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು