Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:14 - ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:14
13 ತಿಳಿವುಗಳ ಹೋಲಿಕೆ  

ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ಅವರು ತಮ್ಮ ತಮ್ಮ ರಾಜರುಗಳಿಗೆ ಅದನ್ನು ತಿಳಿಸುವಂತೆ ಆಜ್ಞಾಪಿಸು. ಆ ಸಮಾಚಾರವೇನೆಂದರೆ - ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತುಗಳಿವು; ನಿಮ್ಮ ರಾಜರುಗಳು ಅರಿಯಬೇಕಾದ ವಿಷಯವಿದು:


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಕಬ್ಬಿಣವನ್ನು ಅದೂ ಉತ್ತರದಿಂದ ಬಂದ ಕಬ್ಬಿಣವನ್ನು ಹಾಗು ಕಂಚನ್ನು ಬಗ್ಗಿಸಲು ಯಾರಿಂದಾದೀತು?”


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


“ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು