Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:15
20 ತಿಳಿವುಗಳ ಹೋಲಿಕೆ  

ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”


ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.


ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾರೆ,” ಎಂದು ಹೇಳಿದನು.


ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”


ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.


ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ನಿಷ್ಪ್ರಯೋಜಕವಾದ ಹಾಗೂ ಮೋಸದ ಮಾತುಗಳಲ್ಲಿ ನೀವು ಭರವಸೆ ಇಟ್ಟಿದ್ದೀರಿ.


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಇದು ಸರ್ವೇಶ್ವರನ ನುಡಿ’ ಎಂದು ಹೇಳುವ ಪ್ರವಾದಿಗಳನ್ನು ನಾನು ಪ್ರತಿಭಟಿಸುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು