Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:2 - ಕನ್ನಡ ಸತ್ಯವೇದವು C.L. Bible (BSI)

2 “ ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: ‘ಬಾಬಿಲೋನಿಯದ ಅರಸನು ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೇಳುವನು: ‘ಯೆಹೂದ್ಯರ ಮೇಲೆ ಬಾಬಿಲೋನಿನ ರಾಜನು ಹೊರಿಸಿದ ನೊಗವನ್ನು ನಾನು ಮುರಿದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:2
5 ತಿಳಿವುಗಳ ಹೋಲಿಕೆ  

ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು