Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:3 - ಕನ್ನಡ ಸತ್ಯವೇದವು C.L. Bible (BSI)

3 ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬೆಲಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರುಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:3
8 ತಿಳಿವುಗಳ ಹೋಲಿಕೆ  

ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು