Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:6 - ಕನ್ನಡ ಸತ್ಯವೇದವು C.L. Bible (BSI)

6 “ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹಾಗಾಗಲಿ, ಯೆಹೋವನು ಹಾಗೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:6
22 ತಿಳಿವುಗಳ ಹೋಲಿಕೆ  

ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ.


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.


“ಈ ದಿನವೇ ಜೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗು, ಬಾಬಿಲೋನಿಗೆ ಸೆರೆಹೋಗಿ ಮರಳಿ ಬಂದಿಳಿದಿರುವ ಹೆಲ್ದಾಯ, ತೊಬೀಯ, ಯೆದಾಯ ಎಂಬವರಿಂದ ಕಾಣಿಕೆಯನ್ನು ಸ್ವೀಕರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು