ಯೆರೆಮೀಯ 29:11 - ಕನ್ನಡ ಸತ್ಯವೇದವು C.L. Bible (BSI)11 ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ. ಅಧ್ಯಾಯವನ್ನು ನೋಡಿ |