Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:12 - ಕನ್ನಡ ಸತ್ಯವೇದವು C.L. Bible (BSI)

12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನೀವು ನನ್ನಲ್ಲಿ ಮೊರೆಯಿಡುವಿರಿ. ನೀವು ನನ್ನಲ್ಲಿಗೆ ಬಂದು ನನ್ನನ್ನು ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:12
20 ತಿಳಿವುಗಳ ಹೋಲಿಕೆ  

“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,


ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.


ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು