Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:16 - ಕನ್ನಡ ಸತ್ಯವೇದವು C.L. Bible (BSI)

16 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ, ದಾವೀದನ ಸಿಂಹಾಸನವನ್ನು ಅಲಂಕರಿಸಿದ್ದ ಅರಸನ ವಿಷಯವಾಗಿ ಹಾಗೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸೋದರರೂ ಈ ನಗರದ ನಿವಾಸಿಗಳೂ ಆದವರ ವಿಷಯವಾಗಿ ಹೇಳಿರುವುದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:16
11 ತಿಳಿವುಗಳ ಹೋಲಿಕೆ  

ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ಅದನ್ನು ಶಾಫಾನನ ಮಗ ಎಲ್ಲಾಸ, ಹಿಲ್ಕೀಯನ ಮಗ ಗೆಮರ್ಯ ಇವರ ಕೈಯಲ್ಲಿ ಕಳಿಸಿದನು. ಇವರು ಜುದೇಯದ ಅರಸ ಚಿದ್ಕೀಯನಿಂದ ಬಾಬಿಲೋನಿಗೆ ಅದರ ಅರಸ ನೆಬೂಕದ್ನೆಚ್ಚರನ ಬಳಿಗೆ ಕಳಿಸಲಾಗಿದ್ದ ರಾಯಭಾರಿಗಳು. ಆ ಪತ್ರದ ಮಾತುಗಳು ಇವು:


ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ್ದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು