Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:18 - ಕನ್ನಡ ಸತ್ಯವೇದವು C.L. Bible (BSI)

18 ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:18
38 ತಿಳಿವುಗಳ ಹೋಲಿಕೆ  

“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.


ಜನಾಂಗಗಳೊಳಗೆ ಅವರನ್ನು ಚದರಿಸುವೆನು; ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶವಿದೇಶಗಳಿಗೆ ತೂರಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದುಹಾಕುವೆನು.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು