Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:2 - ಕನ್ನಡ ಸತ್ಯವೇದವು C.L. Bible (BSI)

2 ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 (ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:2
13 ತಿಳಿವುಗಳ ಹೋಲಿಕೆ  

ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.


ಬಾಬಿಲೋನಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,’ ಎನ್ನುತ್ತಾರೆ,” ಎಂದು ಹೇಳಿದನು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.


ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು