Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:23 - ಕನ್ನಡ ಸತ್ಯವೇದವು C.L. Bible (BSI)

23 ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:23
28 ತಿಳಿವುಗಳ ಹೋಲಿಕೆ  

“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು.


ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.


ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.


ಆಕೆ, “ಅಣ್ಣಾ, ಬೇಡ; ನನ್ನನ್ನು ಕೆಡಿಸಬೇಡ; ಇಸ್ರಯೇಲರಲ್ಲಿ ಇಂಥದು ನಡೆಯಬಾರದು.


ಅತ್ತಿತ್ತ ಓಡಾಡುವ ಕೊಬ್ಬಿದ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನೂ ಕೆನೆಯುತ್ತಾನೆ ತನ್ನ ನೆರೆಯವನ ಹೆಂಡತಿಯನ್ನು ನೋಡಿ !


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು