ಯೆರೆಮೀಯ 29:3 - ಕನ್ನಡ ಸತ್ಯವೇದವು C.L. Bible (BSI)3 ಅದನ್ನು ಶಾಫಾನನ ಮಗ ಎಲ್ಲಾಸ, ಹಿಲ್ಕೀಯನ ಮಗ ಗೆಮರ್ಯ ಇವರ ಕೈಯಲ್ಲಿ ಕಳಿಸಿದನು. ಇವರು ಜುದೇಯದ ಅರಸ ಚಿದ್ಕೀಯನಿಂದ ಬಾಬಿಲೋನಿಗೆ ಅದರ ಅರಸ ನೆಬೂಕದ್ನೆಚ್ಚರನ ಬಳಿಗೆ ಕಳಿಸಲಾಗಿದ್ದ ರಾಯಭಾರಿಗಳು. ಆ ಪತ್ರದ ಮಾತುಗಳು ಇವು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ, ಇವರ ಕೈಯಲ್ಲಿ ಯೆರೂಸಲೇವಿುನಿಂದ ಬರೆದು ರವಾನಿಸಿದ ಕಾಗದದ ಮಾತೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ: ಅಧ್ಯಾಯವನ್ನು ನೋಡಿ |