Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:31 - ಕನ್ನಡ ಸತ್ಯವೇದವು C.L. Bible (BSI)

31 ‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:31
11 ತಿಳಿವುಗಳ ಹೋಲಿಕೆ  

ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನೇ ಸಾರುತ್ತಾರೆ. ಅವರು ನನ್ನಿಂದ ಕಳಿಸಿದವರಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’


“ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆ ಮಾಡಿದ್ದಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು