Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:32 - ಕನ್ನಡ ಸತ್ಯವೇದವು C.L. Bible (BSI)

32 ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:32
24 ತಿಳಿವುಗಳ ಹೋಲಿಕೆ  

ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.


ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.”


ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”


ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ನುಡಿಗಳು : “ನಾನವರಿಗೆ ವಿರುದ್ಧವಾಗಿ ಎದ್ದು ನಿರ್ನಾಮಮಾಡುವೆನು, ಬಾಬಿಲೋನಿನ ಹೆಸರನು, ಜನಶೇಷವನು, ಪುತ್ರಪೌತ್ರರನು.


ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.


ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕೆಂದು ಸರ್ವೇಶ್ವರ ಯೆರೆಮೀಯನಿಗೆ ಅಪ್ಪಣೆಕೊಟ್ಟರು:


ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ಮತ್ತೊಮ್ಮೆ ಈ ಸಂದೇಶವನ್ನು ದಯಪಾಲಿಸಿದರು:


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು