ಯೆರೆಮೀಯ 29:7 - ಕನ್ನಡ ಸತ್ಯವೇದವು C.L. Bible (BSI)7 ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.” ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!