Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:13 - ಕನ್ನಡ ಸತ್ಯವೇದವು C.L. Bible (BSI)

13 ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:13
22 ತಿಳಿವುಗಳ ಹೋಲಿಕೆ  

ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”


“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


“ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.


ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು