Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:21 - ಕನ್ನಡ ಸತ್ಯವೇದವು C.L. Bible (BSI)

21 ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:21
24 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು