Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:22
21 ತಿಳಿವುಗಳ ಹೋಲಿಕೆ  

ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು