Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:8 - ಕನ್ನಡ ಸತ್ಯವೇದವು C.L. Bible (BSI)

8 ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:8
20 ತಿಳಿವುಗಳ ಹೋಲಿಕೆ  

“ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು, ಅವಳಲ್ಲಿ ಸಂತೋಷಪಡದೆ, ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟನೆಂದು ಇಟ್ಟುಕೊಳ್ಳೋಣ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.


“ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


“ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ !


ಸೂಳೆಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟಹೆಂಗಸರಾದ ಒಹೊಲಳನ್ನೂ ಒಹೊಲೀಬಳನ್ನೂ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು