Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:12 - ಕನ್ನಡ ಸತ್ಯವೇದವು C.L. Bible (BSI)

12 ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಇಂತೆನ್ನುತ್ತಾನೆ - ನಿನ್ನ ಗಾಯವು ಗುಣಹೊಂದದು, ನಿನ್ನ ಬಾಸುಂಡೆಯು ಘೋರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಿನ್ನ ಗಾಯವು ಗುಣವಾಗದಂಥಾದ್ದು. ನಿನ್ನ ಬಾಸುಂಡೆಯು ಅಘೋರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:12
13 ತಿಳಿವುಗಳ ಹೋಲಿಕೆ  

ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು