Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:13 - ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಭಾಗಕ್ಕೆ ಯಾರೂ ಇಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ, ನಿನಗೆ ವಾಸಿಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದ್ದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ ವಾಸಿಮಾಡುವ ಔಷಧಗಳು ನಿನಗೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:13
25 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.


“ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು