Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:14 - ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:14
38 ತಿಳಿವುಗಳ ಹೋಲಿಕೆ  

ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ನನಗೆ ನೀನು ಕ್ರೂರನಾಗಿಬಿಟ್ಟಿರುವೆ ನಿನ್ನ ಭುಜಬಲದಿಂದ ಹಿಂಸಿಸುತ್ತಿರುವೆ.


“ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು ! ಬಾಷಾನಿನಲ್ಲಿ ಮೊರೆಯಿಡು ! ಅಬಾರೀಮಿನಲ್ಲಿ ಕಿರುಚಾಡು ! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು !


‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ.


ನಿನ್ನನ್ನು ಅಟ್ಟಿ ಮೇಯಿಸುವ ಕುರುಬರನ್ನು ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಮಿಂಡರನ್ನು ಸೆರೆಹಿಡಿದುಕೊಂಡು ಹೋಗುವರು. ಆಗ ಖಂಡಿತವಾಗಿ ನೀನು ಆಶಾಭಂಗಪಡುವೆ ನಿನ್ನ ದುಷ್ಕೃತ್ಯಗಳ ನಿಮಿತ್ತ ಅವಮಾನಕ್ಕೀಡಾಗುವೆ.


ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


ತನ್ನ ಕೋಪಾಗ್ನಿಯನು ನನ್ನ ಮೇಲೆ ಧಗಧಗಿಸಿದ್ದಾನೆ ನನ್ನನ್ನು ತನ್ನ ವೈರಿಯೆಂದೇ ಪರಿಗಣಿಸಿದ್ದಾನೆ.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ಹೀಗಿರಲು, ಒಹೊಲೀಬಳೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ಯಾವ ಮಿಂಡರಿಂದ ನಿನ್ನ ಆಸೆ ತೊಲಗಿತೋ ಆ ಮಿಂಡರನ್ನು ಅಂದರೆ, ಮನೋಹರ ಯುವಕರು, ಎಲ್ಲ ನಾಯಕ ಉಪನಾಯಕರು, ಪ್ರಭುಪ್ರಧಾನರು, ಅಶ್ವಾರೂಢರು ಆದ ಬಾಬಿಲೋನಿನವರು,


ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.


ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II


ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.


ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು.


ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು