Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:15 - ಕನ್ನಡ ಸತ್ಯವೇದವು C.L. Bible (BSI)

15 ‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಯ್ಯೋ, ನೋವು ನಿಲ್ಲದು ಎಂದು ನಿನ್ನ ವ್ರಣಕ್ಕಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ? ನಿಮ್ಮ ಗಾಯಗಳು ಆಳವಾಗಿವೆ ಮತ್ತು ಅದಕ್ಕೆ ಔಷಧಿಯಿಲ್ಲ. ಯೆಹೋವನಾದ ನಾನು ನಿಮ್ಮ ಮಹಾಪರಾಧಕ್ಕಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ಪಾಪಗಳಿಗಾಗಿ ಹೀಗೆಲ್ಲ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗದಂಥಾದ್ದೇ. ನಿನ್ನ ಅಕ್ರಮ ಬಹಳವಾಗಿರುವುದರಿಂದಲೂ, ನಿನ್ನ ಪಾಪಗಳು ಪ್ರಬಲವಾಗಿರುವುದರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:15
45 ತಿಳಿವುಗಳ ಹೋಲಿಕೆ  

ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು?


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ ನಿರ್ದೋಷಿಯಾಗಿದ್ದರೂ ನನಗೆ ದೇವರ ಪೆಟ್ಟು ಬಾಣಬಿಟ್ಟಂತಿದೆ.’


ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;


ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು