Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:16 - ಕನ್ನಡ ಸತ್ಯವೇದವು C.L. Bible (BSI)

16 ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳೆಲ್ಲಾ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು, ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:16
44 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


“ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.


ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಸಿಯೋನನ್ನು ದ್ವೇಷಿಸುವ ಜನ I ಹಿಂದಿರುಗಲಿ ಪಡೆದು ಅಪಮಾನ II


“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.


“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.


“ಆಗ ಈಜಿಪ್ಟಿನ ಸಕಲ ನಿವಾಸಿಗಳು, ‘ಇಸ್ರಯೇಲ್ ವಂಶದವರಿಗೆ ನಾವು ಬರೀ ದಂಟಿನ ಊರುಗೋಲಾದೆವು’ ಎಂದು ನಾಚಿಕೆಪಟ್ಟು ನಾನೇ ಸರ್ವೇಶ್ವರ ಎಂಬುದಾಗಿ ದೃಢಮಾಡಿಕೊಳ್ಳುವರು.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ.


ನಿಮ್ಮ ದೇವರಾದಸರ್ವೇಶ್ವರ ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ, ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವರು.


ಅನಂತರ ಇಸ್ರಯೇಲರು ಹಿಂದಿರುಗಿ ಬಂದು, ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.


ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.


“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”


ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು