Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:20 - ಕನ್ನಡ ಸತ್ಯವೇದವು C.L. Bible (BSI)

20 ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು. ನಾನು ಇಸ್ರೇಲರನ್ನೂ ಯೆಹೂದ್ಯರನ್ನೂ ಬಲಶಾಲಿಗಳನ್ನಾಗಿ ಮಾಡುವೆನು. ಅವರನ್ನು ಪೀಡಿಸುವ ಜನರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:20
16 ತಿಳಿವುಗಳ ಹೋಲಿಕೆ  

ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7


ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು.”


“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.


ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು