Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:24 - ಕನ್ನಡ ಸತ್ಯವೇದವು C.L. Bible (BSI)

24 ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ತನ್ನ ಹೃದಯಾಲೋಚನೆಯನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:24
24 ತಿಳಿವುಗಳ ಹೋಲಿಕೆ  

ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನ ತಪ್ಪದೆ ನೆರವೇರಿಸುವೆನು.


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.


ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು