Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:6 - ಕನ್ನಡ ಸತ್ಯವೇದವು C.L. Bible (BSI)

6 ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವದುಂಟೇ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ವಿಚಾರಿಸಿ ನೋಡಿರಿ. ಪುರುಷನು ಮಗುವನ್ನು ಹೆರಬಲ್ಲನೇ. ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಏಕೆ ಮುಖಗಳೆಲ್ಲಾ ಕಳೆಗುಂದಿದವು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:6
19 ತಿಳಿವುಗಳ ಹೋಲಿಕೆ  

ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಅವುಗಳ ನೋಟ, ರಾಷ್ಟ್ರಗಳಿಗೆ ಪ್ರಾಣಸಂಕಟ; ಎಲ್ಲರ ಮುಖಗಳಿಗೆ ಮಂಕಾಟ.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.


ನಡುಗುವಂತಾಯಿತಲ್ಲಿ ಗಡಗಡನೆ I ಪ್ರಸವ ವೇದನೆಯಂತಾಯಿತವರಿಗೆ II


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಈ ಸುದ್ದಿ ಬಿತ್ತು ಬಾಬಿಲೋನಿನ ಅರಸನ ಕಿವಿಗೆ ಅವನ ಕೈಗಳಿದೋ ಜೋಲುಬಿದ್ದಿವೆ ಅವನನ್ನು ಹಿಡಿದಿದೆ ಪ್ರಸವವೇದನೆಯಂಥ ಯಾತನೆ.


ದಮಸ್ಕಸ್ ಕುಂದಿದೆ, ಓಡಿಹೋಗಲು ಸಿದ್ಧವಿದೆ. ಅದಕ್ಕೆ ನಡುಕ ಹುಟ್ಟಿದೆ. ಪ್ರಸವವೇದನೆಗೆ, ಕಷ್ಟಸಂಕಟಕ್ಕೆ ಅದು ಒಳಗಾಗಿದೆ.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರ ಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ : “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?


ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.


ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು