Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:1
34 ತಿಳಿವುಗಳ ಹೋಲಿಕೆ  

ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.


ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.


ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಇಂತಹ ಸಮೃದ್ಧಿ ಪಡೆದಿರುವ ಜನರು ಭಾಗ್ಯವಂತರು I ಯಾರಿಗೆ ದೇವರು ಪ್ರಭುವಾಗಿಹನೋ ಅವರು ಧನ್ಯರು II


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು