Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:12 - ಕನ್ನಡ ಸತ್ಯವೇದವು C.L. Bible (BSI)

12 ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:12
35 ತಿಳಿವುಗಳ ಹೋಲಿಕೆ  

ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಎಲೆ ಒಣಗಿದ ಮರಗಳಂತೆ ಆಗುವಿರಿ. ಜಲವಿಲ್ಲದ ವನದಂತಾಗುವಿರಿ.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ.


ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


ಮಲೆನಾಡಿನ, ಕೆಳನಾಡಿನ ಹಾಗೂ ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಲ ಪ್ರದೇಶಗಳು, ಜುದೇಯದ ಊರುಗಳು, ಈಎಲ್ಲ ಸ್ಥಳಗಳಲ್ಲಿ ಮಂದೆಗಳು ಲೆಕ್ಕಿಸುವವನ ಕಣ್ಮುಂದೆ ಮತ್ತೆ ಹಾದುಹೋಗುವುವು. ಇದು ಸರ್ವೇಶ್ವರನಾದ ನನ್ನ ನುಡಿ.”


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು : ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು.


ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು