Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರೂ ವೃದ್ಧರೂ ಜೊತೆಯಾಗಿ ಹರ್ಷಿಸುವರು; ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನುಂಟುಮಾಡಿ ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:13
22 ತಿಳಿವುಗಳ ಹೋಲಿಕೆ  

ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.


ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


ಶಿಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶಿಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಪ್ರಾಂತ್ಯಕ್ಕೆ ಓಡಿಹೋಗಿರಿ.


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II


ಯುವಕರೂ ಯುವತಿಯರೂ I ಮುದುಕರೂ ಮಕ್ಕಳೂ II


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು