Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:14 - ಕನ್ನಡ ಸತ್ಯವೇದವು C.L. Bible (BSI)

14 ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:14
32 ತಿಳಿವುಗಳ ಹೋಲಿಕೆ  

ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಇಸ್ರಯೇಲರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗಾಗಿ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು, ಸೇವೆ ನಡೆಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ, ಪವಿತ್ರಾಲಯದ ಪಾತ್ರೆಗಳೂ, ಇರುವ ಕೊಠಡಿಗಳಲ್ಲಿ ಇಡಬೇಕು; ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ,’ ಎಂದು ಬರೆದುಕೊಟ್ಟರು.


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II


ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.”


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು