Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಇಂತೆನ್ನುತ್ತಾರೆ: “ನಿನ್ನ ಭವಿಷ್ಯದ ಬಗ್ಗೆ ಭರವಸೆಯಿಂದಿರು ನಿನ್ನ ಮಕ್ಕಳು ಹಿಂದಿರುಗಿ ಸ್ವದೇಶ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ನಿನಗೆ ಮುಂದೆ ಒಳ್ಳೆಯ ಗತಿಯಾಗುವದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಇಸ್ರೇಲೇ, ನಿನ್ನ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಬರುವರೆಂಬ ನಿರೀಕ್ಷೆ ನಿನಗಿರಲಿ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:17
19 ತಿಳಿವುಗಳ ಹೋಲಿಕೆ  

ಇಂತಿರಲು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ ಅದರಿಂದಲೆ ನನಗೆ ನಂಬಿಕೆ-ನಿರೀಕ್ಷೆ ಮರುಕಳಿಸುತ್ತದೆ.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ನಾನು ಇಂತೆಂದುಕೊಂಡೆ: ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು ಸರ್ವೇಶ್ವರನಲ್ಲಿ ನಾನಿತ್ತ ನಿರೀಕ್ಷೆ ವ್ಯರ್ಥವಾಯಿತು.”


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ಮಣ್ಣು ಮುಕ್ಕಬೇಕಾಗಿ ಬಂದರೂ


ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.


ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು