Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:18 - ಕನ್ನಡ ಸತ್ಯವೇದವು C.L. Bible (BSI)

18 ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:18
54 ತಿಳಿವುಗಳ ಹೋಲಿಕೆ  

ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II


ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


“ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು.


ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನಿಗಾದರೊ ಬೆನ್ನಿಗೆ ಬೆತ್ತ.


ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;


ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ II


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು