ಯೆರೆಮೀಯ 31:19 - ಕನ್ನಡ ಸತ್ಯವೇದವು C.L. Bible (BSI)19 ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’ ಅಧ್ಯಾಯವನ್ನು ನೋಡಿ |
ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.