Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:2 - ಕನ್ನಡ ಸತ್ಯವೇದವು C.L. Bible (BSI)

2 ಇದು ಸರ್ವೇಶ್ವರನಾದ ನನ್ನ ನುಡಿ. ಅಳಿದುಳಿದಾ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯಿತು. ಇಸ್ರಯೇಲ್ ಶಾಂತಿಯನ್ನು ಅರಸುತ್ತಾ ಹೋಗುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದು ಯೆಹೋವನ ನುಡಿ - ಹತಶೇಷವಾದ ಜನಕ್ಕೆ ಅರಣ್ಯದಲ್ಲಿ ದಯೆದೊರೆಯುವದು; ಇಸ್ರಾಯೇಲು ವಿಶ್ರಾಂತಿಯನ್ನು ಹುಡುಕುವದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು ಹೀಗನ್ನುವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಹೀಗೆನ್ನುತ್ತಾನೆ: “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಆಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ರಾಂತಿಯನ್ನು ಬಯಸಿ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:2
32 ತಿಳಿವುಗಳ ಹೋಲಿಕೆ  

ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ತನ್ನ ಜನರನ್ನೋ ಹೊರತಂದನು ಕುರಿಮಂದೆಯಂತೆ I ಅಡವಿಯೊಳು ಪರಿಪಾಲಿಸಿದನು ಕುರಿಗಾಹಿಯಂತೆ II


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ, ನೀವು ಇನ್ನು ವಿಶ್ರಾಂತಿಹೊಂದಿಲ್ಲ.


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ಅದಕ್ಕೆ ಸರ್ವೇಶ್ವರ, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಕ್ಷಮಿಸಿದ್ದೇನೆ.


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


“ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು.


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.


ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.


ಜನಾಂಗಗಳ ಮಧ್ಯೆ ಮರುಭೂಮಿಗೆ ಕರೆತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು