Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:21 - ಕನ್ನಡ ಸತ್ಯವೇದವು C.L. Bible (BSI)

21 “ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:21
23 ತಿಳಿವುಗಳ ಹೋಲಿಕೆ  

ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ನಿನ್ನಿಂದ ಶಕ್ತಿಪಡೆಯುವವರು ಧನ್ಯರು I ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು II


ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ:


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.


ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು