Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:23 - ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:23
23 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II


ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II


ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಸತ್ಯಸಂಧತೆ ಕಾಡುಮೇಡೆನ್ನದೆ ಎಲ್ಲೆಡೆ ನೆಲೆಗೊಳ್ಳುವುದು. ಸರ್ವರೂ ಸತ್ಯಸಂಧರಾಗಿರುವುದರಿಂದ ಸಮಾಧಾನ ನೆಲೆಗೊಳ್ಳುವುದು.


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು