Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:25 - ಕನ್ನಡ ಸತ್ಯವೇದವು C.L. Bible (BSI)

25 ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದುಬರ್ಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:25
14 ತಿಳಿವುಗಳ ಹೋಲಿಕೆ  

ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.


ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು