ಯೆರೆಮೀಯ 31:27 - ಕನ್ನಡ ಸತ್ಯವೇದವು C.L. Bible (BSI)27 “ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬಿತ್ತುವ ದಿನಗಳು ಬರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು. ಅಧ್ಯಾಯವನ್ನು ನೋಡಿ |
ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.