Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:3
28 ತಿಳಿವುಗಳ ಹೋಲಿಕೆ  

ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;


ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.


ಜೆರುಸಲೇಮಿನ ಜನರಾದರೋ ಇಂತೆಂದರು : ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು