Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:31 - ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:31
24 ತಿಳಿವುಗಳ ಹೋಲಿಕೆ  

ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.


“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


“ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಯಾಜಕತ್ವ ಬದಲಾವಣೆಗೊಂಡರೆ ಧರ್ಮಶಾಸ್ತ್ರವೂ ಬದಲಾವಣೆಗೊಳ್ಳಬೇಕಾದುದು ಅಗತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು