Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:33 - ಕನ್ನಡ ಸತ್ಯವೇದವು C.L. Bible (BSI)

33 ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:33
36 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು : ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಅವನ ಎದೆಯಲ್ಲಿದೆ ದೇವರ ನಿಯಮ I ನೆಲೆತಪ್ಪದು ಅವನ ನಡತೆಯ ಕ್ರಮ II


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೊಳ್ಳುವೆನಾಗ ಒಡಂಬಡಿಕೆಯನು.”


ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II


ಅವು ನಿನ್ನ ಬೆರಳಿಗೆ ಉಂಗುರವಾಗಿರಲಿ, ನಿನ್ನ ಹೃದಯದ ಹಲಗೆಯಲ್ಲಿ ಬರೆದಿರಲಿ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು