Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:34 - ಕನ್ನಡ ಸತ್ಯವೇದವು C.L. Bible (BSI)

34 ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:34
42 ತಿಳಿವುಗಳ ಹೋಲಿಕೆ  

ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.”


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.


ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.


ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ II ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ I ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ II


‘ಸರ್ವೇಶ್ವರನನ್ನು ಅರಿತುಕೊಳ್ಳಿರಿ’ ಎಂದು ನೆರೆಯವನಿಗಾಗಲಿ, ಸೋದರನಿಗಾಗಲಿ ಯಾರೂ ಬೋಧಿಸಬೇಕಾಗಿಲ್ಲ. ಹಿರಿಯಕಿರಿಯರು ಎಲ್ಲರೂ ನನ್ನನ್ನು ಅರಿಯುವರು.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.


ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವವನ್ನು ಒಂದು ದಿನ ಅರಿತುಕೊಳ್ಳುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು