Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:35 - ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇವಿುಸುವಾತನೂ ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:35
39 ತಿಳಿವುಗಳ ಹೋಲಿಕೆ  

ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.


ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ಹೇ ಪ್ರಭು, ನಿನ್ನ ವಾಕ್ಯ ಶಾಶ್ವತ I ಪರಲೋಕದಲಿ ಅದು ಚಿರ ಶಾಶ್ವತ II


ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II


ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಆತನು ಬಾಳಲಿ ಆಚಂದ್ರಾರ್ಕನಾಗಿ I ತಲತಲಾಂತರಕು ಭಯಭಕುತಿಯಿಂದಿರಲಿ II


ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.


ಖಗೋಳದ ನಿಯಮಗಳನು ತಿಳಿದಿರುವೆಯಾ? ಅದರ ಆಳ್ವಿಕೆಯನು ಇಳೆಯೊಳು ಸ್ಥಾಪಿಸಿರುವೆಯಾ?


ನಿನ್ನ ವಿಧಿಗನುಸಾರ ಅವು ಇಂದಿಗೂ ಉಳಿದಿವೆ I ಏಕೆನೆ, ಸರ್ವವೂ ಮಾಡುತಿವೆ ನಿನಗೆ ಸೇವೆ II


ಸ್ಥಾಪಿಸಿದನು ಎಂದೆಂದಿಗೂ ಅವನ್ನು I ವಿಧಿಸಿಹನು ಮೀರಲಾಗದ ನಿಯಮವನು I


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು