Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:37 - ಕನ್ನಡ ಸತ್ಯವೇದವು C.L. Bible (BSI)

37 ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನು ಹೀಗೆನ್ನುತ್ತಾನೆ - ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಾನು ಆ ವಂಶವನ್ನು ನಿರಾಕರಿಸಿಬಿಟ್ಟೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:37
13 ತಿಳಿವುಗಳ ಹೋಲಿಕೆ  

ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವು ನಿನಗೆ ತಿಳಿದಿದ್ದರೆ ಹೇಳು, ನೋಡೋಣ!


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು