Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:4 - ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:4
31 ತಿಳಿವುಗಳ ಹೋಲಿಕೆ  

ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”


‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.


ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II


ಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


“ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.


ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.


ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II


ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು